ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021
ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪುರಲೆ ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆಯ ಅಭಿಷೇಕ್ (23) ಮೃತ ಯುವಕ.
ಪುರಲೆ ಕಡೆಯಿಂದ ಅಭಿಷೇಕ್ ರಾತ್ರಿ ಹೊಸಮನೆ ಬಡಾವಣೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವು ಅಭಿಷೇಕ್ ತೆರಳುತ್ತಿದ್ದ ಬೈಕ್’ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಅಭಿಷೇಕ್ ತಲೆಗೆ ತೀವ್ರ ಗಾಯವಾಗಿದೆ.
ಸ್ಥಳೀಯರ ನೆರವಿನಿಂದ ಅಭಿಷೇಕ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತನ ಮಾರ್ಗ ಮಧ್ಯದಲ್ಲೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ವಿದ್ಯಾನಗರದಲ್ಲಿರುವ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200