ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್’ನಲ್ಲಿ ಮೆಸೇಜ್ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ. ಇದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರಲ್ಲಿ ಆತಂಕ ಸೃಷ್ಟಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯ ಸೆಕ್ಷನ್ ಒಂದರ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ (39) ಅವರು ನಾಪತ್ತೆಯಾಗಿದ್ದಾರೆ. ಬೆಳಗ್ಗೆಯಿಂದ ಅವರ ಹುಡುಕಾಟ ನಡೆಯುತಿದೆ.
ಬೆಳಗ್ಗೆ ಮನೆಯಿಂದ ಹೊರಟಿದ್ದಾರೆ
ಗಿರಿರಾಜ್ ಅವರು ಬೆಳಗಿನ ಜಾವ ಮನೆಯಿಂದ ಹೊರಟಿದ್ದಾರೆ. ತಮ್ಮ ವಾಹನವನ್ನು ಕೂಡ ಕೊಂಡೊಯ್ದಿಲ್ಲ ಎಂದು ತಿಳಿದು ಬಂದಿದೆ. ಬಹು ಹೊತ್ತಾದರೂ ಗಿರಿರಾಜ್ ಮನೆಗೆ ಹಿಂತಿರುಗದ ಹಿನ್ನೆಲೆ ಮನೆಯವರು ಆತಂಕಕ್ಕೀಡಾಗಿದ್ದಾರೆ. ನೆರೆಹೊರೆಯವರು,ಸ್ನೇಹಿತರನ್ನು ವಿಚಾರಿಸಿದ್ದಾರೆ.
ವಾಟ್ಸಪ್’ನಲ್ಲಿ ಆತ್ಮಹತ್ಯೆಯ ಮೆಸೇಜ್
ಗಿರಿರಾಜ್ ಅವರು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪ್’ಗೆ ಮೆಸೇಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯದ ಒತ್ತಡದ ಹಿನ್ನಲೆಯಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕ
ಗಿರಿರಾಜ್ ಅವರು ವಾಟ್ಸಪ್ ಸಂದೇಶ ಮತ್ತು ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕ ಸೃಷ್ಟಿಯಾಗಿದೆ. ಗಿರಿರಾಜ್’ಗಾಗಿ ಇತರೆ ಸಿಬ್ಬಂದಿ ಹುಡಕಾಟ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200