ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021
ತೋಟವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಸಾಗುವಾನಿ ನಾಟಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗ ದಾಳಿ ನಡೆಸಿದ ಅರಣ್ಯಾ ಇಲಾಖೆ ಅಧಿಕಾರಿಗಳು ನಾಟಾ ವಶಪಡಿಸಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿ ದಾಳಿ ನಡೆದಿದೆ. ಜಾನಪ್ಪ ಬೈರು ಎಂಬುವವರ ತೋಟದಲ್ಲಿ ಸಾಗುವಾನಿ ನಾಟಗಳಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇವತ್ತು ಪರಿಶೀಲನೆ ನಡೆಸಿದಾಗ ನಾಟಾ ಪತ್ತೆಯಾಗಿದೆ.
ಎಷ್ಟಿತ್ತು ನಾಟಾ? ಮೌಲ್ಯವೆಷ್ಟು?
ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ 14 ಸಾಗುವಾನಿ ನಾಟಾ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಎರಡು ಲಕ್ಷ ರೂ. ಮೌಲ್ಯಿಇರಬಹುದು ಎಂದು ಅಂದಾಜಿಸಲಾಗಿದೆ.
ಅಕ್ರಮವಾಗಿ ನಾಟಾ ದಾಸ್ತಾನು ಮಾಡಿಕೊಂಡಿದ್ದ ಆರೋಪ ಸಂಬಂಧ ತೋಟದ ಮಾಲೀಕ ಜಾನಪ್ಪ ಬೈರು ಮತ್ತು ಅವರ ಮಗ ಜಗದೀಶ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಲಯ ಅರಣ್ಯಾಧಿಕಾರಿ ಆರ್.ಟಿ.ಮಂಜುನಾಥ್, ಡಿವೈಆರ್’ಎಫ್ಓ ಅಬ್ದುಲ್ ಕರೀಂ, ಪವನ್, ಗಿರಿಸ್ವಾಮಿ, ಫಾರೆಸ್ಟ್ ಗಾರ್ಡ್ ಸುನಿಲ್, ಸೂರ್ಯವಂಶಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200