ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಾನು ಬಿಬಿಎಂ ಓದುವಾಗ ಶಿವಮೊಗ್ಗಕ್ಕೆ ಭವಿಷ್ಯ ಇಲ್ಲ ಎನ್ನುತ್ತಿದ್ದರು. ಆದರೆ ಇವತ್ತು ನಮ್ಮ ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜ್, ಕೃಷಿ ವಿಶ್ವವಿದ್ಯಾಲಯ, ಇರುವಕ್ಕಿಯಲ್ಲಿ ಸಾವಿರ ಎಕರೆ ಕ್ಯಾಂಪಸ್ ಹೊಂದಿರುವ ಶಿವಪ್ಪನಾಯಕ ಯೂನಿವರ್ಸಿಟಿಯನ್ನು ನಿರ್ಮಾಣ ಮಾಡಿ ಜಿಲ್ಲೆಯ್ನನು ಎಜುಕೇಶನ್ ಹಬ್ ಆಗಿ ಪರಿವರ್ತನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಭಾರತ ಸರ್ಕಾರದ ಅಟಲ್ ಇನ್ನೋವೆಷನ್ ಮಿಷನ್ ಆಯೋಗದಿಂದ ನಿರ್ಮಾಣವಾಗಿರುವ ಅಟಲ್ ಥಿಂಕರಿಂಗ್ ಲ್ಯಾಬನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಶಿವಮೊಗ್ಗವನ್ನು ಎಜುಕೇಷನ್ ಹಬ್ ಮಾಡುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕನಸು ನನಸಾಗಿದೆ ಎಂದರು.
ಎರಡು ವರ್ಷದಲ್ಲಿ ಚಿತ್ರಣ ಬದಲು
ಸಮಯ ಅತ್ಯಂತ ಮುಖ್ಯ ಈ ಕಾರಣಕ್ಕೆ ಶಿವಮೊಗ್ಗದಲ್ಲಿ 3500 ಮೀಟರ್ ರನ್ ವೇ ಹೊಂದಿರುವ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇನ್ನೆರಡು ವರ್ಷದಲ್ಲಿ ಶಿವಮೊಗ್ಗದ ಚಿತ್ರಣ ಬದಲಾಗಲಿದೆ ಎಂದು ಸಂಸದರಾದ ಬಿವೈ ರಾಘವೇಂದ್ರ ಅವರು ತಿಳಿಸಿದರು.

ನೂತನ ಶಿಕ್ಷಣ ನೀತಿ ಕರ್ನಾಟಕದಲ್ಲಿ ಜಾರಿಯಾಗುತ್ತಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಜೊತೆಗೆ ಕೌಶಲ್ಯ ವೃದ್ಧಿಸುವ ಕೆಲಸ ಆಗುತ್ತದೆ ಎಂದರು.
ಇದಕ್ಕೂ ಮೊದಲು ಅಟಲ್ ಥಿಂಕರಿಂಗ್ ಲ್ಯಾಬ್’ನಲ್ಲಿ ವಿದ್ಯಾರ್ಥಿಗಳು ಮಾಡಿದ ವಿಜ್ಞಾನದ ಪ್ರಯೋಗಗಳ ಮಾದರಿಯನ್ನು ಸಂಸದ ರಾಘವೇಂದ್ರ ವೀಕ್ಷಿಸಿ, ಮಾಹಿತಿ ಪಡೆದುಕೊಂಡರು.
ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್.ವಿಶ್ವನಾಥ್, ಪ್ರಮುಖರಾದ ಅಶ್ವತ್ಥ ನಾರಾಯಣ, ಡಿ. ಎಸ್ ಅರುಣ್, ಎಂ.ಎನ್.ರಮೇಶ್, ಬಸವರಾಜಪ್ಪ, ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






