ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮನೆ ಕೆಲಸಕ್ಕೆಂದು ಬಂದ ಮಹಿಳೆಯೊಬ್ಬರು ಮನೆಯವರೆಲ್ಲ ಮಲಗಿದ್ದಾಗ ಬೆಳ್ಳಿ ವಸ್ತುಗಳನ್ನು ಹೊತ್ತೊಯ್ದಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.
ಶಿವಮೊಗ್ಗ ಗಾಂಧಿನಗರದ ನಾಗರತ್ನ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನಾಗರತ್ನ ಅವರ ಪತಿ ಅನಾರೋಗ್ಯಕ್ಕೀಡಾಗಿದ್ದಾರೆ. ಹಾಗಾಗಿ ಮನೆಯಲ್ಲಿ ಕೆಲಸಕ್ಕೆ ಮಹಿಳೆಯೊಬ್ಬರನ್ನು ನೇಮಿಸಲಾಗಿತ್ತು.
ಆನ್’ಲೈನ್ ಮೂಲಕ ವ್ಯಕ್ತಿಯೊಬ್ಬರ ಮೂಲಕ ಚನ್ನಗಿರಿ ಮೂಲದ ಉಮಾ ಎಂಬುವವರನ್ನು ಕಲಸಕ್ಕೆ ನೇಮಿಸಿಕೊಳ್ಳಲಾಗಿತ್ತು. ಸುಮಾರು 10 ದಿನ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಉಮಾ, ಏಕಾಏಕಿ ನಾಪತ್ತೆಯಾಗಿದ್ದಾಳೆ.

ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಬೆಳ್ಳಿ ವಸ್ತುಗಳು, ಒಂದು ಸೂಟ್ ಕೇಸ್ ಕಳವು ಮಾಡಿಕೊಂಡು ಪರಾರಿಯಾಗಿದ್ದಾಳೆ. ಸುಮಾರು 86 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು ಕಳವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






