‘ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನೆ ಮೇಲೆ ದಾಳಿಯಾದ್ರೆ ಮತ್ತಷ್ಟು ಭ್ರಷ್ಟಾಚಾರ ಹೊರಕ್ಕೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 11 ಅಕ್ಟೋಬರ್ 2021

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾದಂತೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ಮನೆ ಮೇಲೂ ಐಟಿ ದಾಳಿಯಾದರೆ ಇನ್ನಷ್ಟು ಭ್ರಷ್ಟಾಚಾರದ ಹಣ ಹೊರಬರಲಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ನೀರಾವರಿ ಇಲಾಖೆಯಲ್ಲಿನ ಎರಡು ಸಾವಿರ ಕೋಟಿ ರೂ. ಅವ್ಯವಹಾರ ಸಂಬಂಧ ಈ ದಾಳಿಯಾಗಿದೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ಮನೆ ಮೇಲೂ ಐಟಿ ಅಥವಾ ಜಾರಿ ನಿರ್ದೇಶನಾಲಯದಿಂದ ದಾಳಿಯಾದರೆ ಇನ್ನಷ್ಟು ಭ್ರಷ್ಟಾಚಾರದ ಹಣ ಹೊರಬರಲಿದೆ ಎಂದರು.

ಯಡಿಯೂರಪ್ಪ ಗುಂಪು, ಆರ್’ಎಸ್ಎಸ್ ಗುಂಪು

ಬಿಜೆಪಿಯೊಳಗೆ ಯಡಿಯೂರಪ್ಪ ಗುಂಪು ಮತ್ತು ಆರ್.ಎಸ್.ಎಸ್ ಗುಂಪುಗಳಿವೆ. ಯಡಿಯೂರಪ್ಪ ವಿರುದ್ಧ ಆರ್.ಎಸ್.ಎಸ್ ಗುಂಪು ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳಬಾರದು ಎಂಬ ಕಾರಣಕ್ಕೆ ಉಮೇಶ್ ಮನೆ ಮೇಲೆ ಐಟಿ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದರು.

1632381449326627 1

ಇನ್ನು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದರ ಕಳೆದು ಹೋಗಿದ್ದಾರೆ. ಅವರನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದರು.

ADVT JULY NANJAPPA HOSPITAL HOME LAB TESTING

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment