ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021
ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಎಲೆಕ್ಟ್ರಾನಿಕ್ ವಾಹನಗಳಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಬೇಕು ಜೊತೆಗೆ ಬಿಪಿಎಲ್ ಕಾರ್ಡ್’ದಾರರಿಗೆ ಅಡುಗೆ ಅನಿಲ, ಎಣ್ಣೆ, ಬೇಳೆಕಾಲುಗಳನ್ನು ರಿಯಾಯತಿ ದರದಲ್ಲಿ ಒದಗಿಸಬೇಕು ಎಂದು ಆಗ್ರಹಿಸಿ ಏಕಾಂಗಿ ಪ್ರತಿಭಟನೆ ನಡೆಸಿದರು.



LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





