ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021
ಕಾಂಗ್ರೆಸ್ ನಾಯಕರನ್ನು ಡ್ರಗ್ ಪೆಡ್ಲರ್, ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಟೀಕಿಸಲಾಗುತ್ತಿದೆ. ಆದರೆ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಗಂತ ಅವರನ್ನು ಗಾಂಜಾ ಪೆಡ್ಲರ್ ಎಂದು ಕರೆಯಲು ಆಗುತ್ತದೆಯೇ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರಶ್ನಿಸಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದೆ. ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಆರೋಪಿಸಿರು.
ಕಳೆದ ವಿಧಾನ ಸಭೆ ಚುನಾವಣೆಯ ನಂತರ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಮಿತಿ ಮೀರಿವೆ. ಇದರ ಬಗ್ಗೆ ಗೊತ್ತಿದ್ದರೂ ಕೂಡ ಸ್ಥಳೀಯ ಶಾಸಕರಾದ ಈಶ್ವರಪ್ಪ ಯಾವುದೇ ಗಟ್ಟಿ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಸ್ಮಾರ್ಟ್ ಸಿಟಿ ಲೂಟಿ
ಸರ್ಕಾರದ ಯಾವುದೇ ಕಚೇರಿಗಳಲ್ಲಿಯೂ ಕೆಲಸಗಳು ಆಗುತ್ತಿಲ್ಲ. ಜನಸಾಮಾನ್ಯ ದಿನನಿತ್ಯ ಅಲೆಯುವಂತಾಗಿದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಕಾಲಮಿತಿಯಲ್ಲಿ ಮುಗಿಯಬೇಕಾದ ಕೆಲಸಗಳು ಮುಗಿಯುತ್ತಿಲ್ಲ. ಚೆನ್ನಾಗಿರುವ ಡೆಕ್ ಸ್ಲ್ಯಾಬ್‌ಗಳನ್ನು ಒಡೆದು ಕಳಪೆ ಕಾಮಗಾರಿ ಮಾಡಲಾಗುತ್ತಿದೆ. ಇದರಿಂದಾಗಿ ಇಡೀ ನಗರದ ಜನ ಮಾತ್ರವಲ್ಲ ಹೊರಗಿನಿಂದ ಬರುವವರೂ ಕೂಡ ಪರಿತಪಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೊಮ್ಮನಕಟ್ಟೆ ಮಂಜುನಾಥ, ಎನ್.ಕೆ. ಶಾಮಸುಂದರ್, ಆರ್.ಕೆ. ಉಮೇಶ್, ದೀಪಕ್ ಸಿಂಗ್, ಶಾಮೀರ್ ಖಾನ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200