ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ.
ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ.
ರಾಜಕೀಯ ವಿದ್ಯಮಾನದ ಚರ್ಚೆ
ಮಾಜಿ ಶಾಸಕ ಮಧು ಬಂಗಾರಪ್ಪ ಮತ್ತು ಇತರೆ ಮುಖಂಡರ ಜೊತೆಗೆ ಸಿದ್ಧರಾಮಯ್ಯ ಅವರು ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು. ರಾಜ್ಯ ರಾಜಕಾರಣ ಕುರಿತು ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಮುಖರ ಭೇಟಿ, ಸೆಲ್ಫಿಗೆ ಪೈಪೋಟಿ
ಸಿದ್ಧರಾಮಯ್ಯ ಅವರು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಮುಖರನ್ನು ಭೇಟಿಯಾದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್ ಸೇರಿದಂತೆ ಹಲವರು ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಬಳಿಕ ಸಿದ್ಧರಾಮಯ್ಯ ಅವರು ಮನೆಯಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿ, ಫೋಟೊ ಮತ್ತು ಸೆಲ್ಫಿಗೆ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.
ಮಧು ಬಂಗಾರಪ್ಪ ನಿವಾಸಕ್ಕೆ ಸಿದ್ಧರಾಮಯ್ಯ ಅವರ ಭೇಟಿ ಮತ್ತು ಪ್ರಮುಖ ವಿಚಾರಗಳ ಕುರಿತು ಚರ್ಚೆ ಜಿಲ್ಲೆ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200