ಶಿವಮೊಗ್ಗ ಲೈವ್.ಕಾಂ |SHIMOGA NEWS | 24 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಖಂಡಿಸಿ ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಯುವ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ಸೈನ್ಸ್ ಮೈದಾನದಿಂದ ಗೋಪಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಯುವ ಬ್ರಿಗೇಡ್ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ದಸರಾ ಹಬ್ಬದ ಸಂದರ್ಭ ದುರ್ಗಾ ಮಾತೆಯ ಮೂರ್ತಿಯನ್ನು ಹಾನಿ ಮಾಡಲಾಗಿದೆ. ಹಿಂದೂಗಳ ಹತ್ಯೆ ಮಾಡಲಾಗಿದೆ. ಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಂಗ್ಲಾದೇಶದ ಪೀರಗಂಜ್, ರಂಗ್ ಪುರ್ ಪ್ರದೇಶಗಳಲ್ಲಿ ಹಿಂದೂಗಳ ಮನೆಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಯುವ ಬ್ರಿಗೇಡ್’ನ ವಿನಯ್, ಕಿರಣ್ ಹೆಗ್ಗದ್ದೆ, ಪ್ರವೀಣ್ ಕುಮಾರ್, ಸಹೋದರಿ ನಿವೇದಿತಾ ಪ್ರತಿಷ್ಠಾನದ ಪ್ರಮುಖರು ಪಂಜಿನ ಮೆರವಣಿಗೆಯಲ್ಲಿದ್ದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






