ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021
ಫುಟ್ ಪಾತ್ ಮೇಲೆ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆ ಪೊಲೀಸರು, ಮಹಾನಗರ ಪಾಲಿಕೆ ಅಧಿಕಾರಿಗಳು ಇವತ್ತು ಕಾರ್ಯಾಚರಣೆ ನಡೆಸಿದರು. ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿದರು.
ನಗರದ ಬಿ.ಹೆಚ್.ರಸ್ತೆ, ನೆಹರೂ ರೋಡ್ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು.
ವ್ಯಾಪಾರಿಗಳ ತೆರವು ಕಾರ್ಯ
ಫುಟ್ ಪಾತ್ ಮೇಲೆ ವ್ಯಾಪಾರ ಮಾಡುವುದು, ಅಂಗಡಿಗಳು, ಹೊಟೇಲ್’ಗಳ ಬೋರ್ಡ್’ಗಳನ್ನ ಇಡಲಾಗಿತ್ತು. ಇದರಿಂದ ಪಾದಚಾರಿಗಳು ಫುಟ್ ಪಾತ್ ಬಿಟ್ಟು, ರಸ್ತೆ ಮೇಲೆ ಓಡಾಡುತ್ತಿದ್ದರು. ಇದರಿಂದ ಅಪಘಾತಗಳು ಸಂಭವಿಸುವ ಆತಂಕವಿತ್ತು.
ಇನ್ನು, ಬೀದಿ ಬದಿ ವ್ಯಾಪಾರಿಗಳು ಫುಟ್ ಪಾತ್ ಮೇಲೆ ವ್ಯಾಪಾರ ಮಾಡದಂತೆ ಮುನ್ನೆಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇವತ್ತು ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೀದ ಬದಿ ವ್ಯಾಪಾರಿಗಳನ್ನು ತೆರವು ಮಾಡಲಾಯಿತು.

ಕೆಲವು ವಸ್ತುಗಳು ವಶಕ್ಕೆ
ಇನ್ನು, ಪೊಲೀಸರು ಮತ್ತು ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಕೆಲವರು ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಕೆಲವು ವಸ್ತುಗಳು, ಅಂಗಡಿ, ಹೊಟೇಲ್’ಗಳ ಬೋರ್ಡ್’ಗಳನ್ನು ಪೊಲೀಸರು ವಶಕ್ಕೆ ಪಡೆದು, ಟೈಗರ್ ವಾಹನದಲ್ಲಿ ಠಾಣೆಗೆ ಕೊಂಡೊಯ್ಯಲಾಯ್ತು.
LATEST NEWS
- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

About The Editor
ನಿತಿನ್ ಆರ್.ಕೈದೊಟ್ಲು
















