ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯ ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ.
ಪೊಲೀಸ್ ಕಸ್ಟಡಿಗೆ ಆರೋಪಿಗಳು
ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆದರಿಕೆ ಪ್ರಕರಣ ಸಂಬಂಧ ಇವತ್ತಿನಿಂದ ವಿಚಾರಣೆ ನಡೆಯಲಿದೆ.
ಬಿಗಿ ಪೊಲೀಸ್ ಭದ್ರತೆ
ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ನಾಗೇಂದ್ರಾನನ್ನು ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಕರೆತರಲಾಯಿತು. ನ್ಯಾಯಾಲಯದ ಆವರಣದಲ್ಲಿಯು ಭದ್ರತೆ ನಿಯೋಜಿಸಲಾಗಿತ್ತು.
ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲಾಗಿತ್ತು. ಇದರ ಸಂಪೂರ್ವ ಮಾಹಿತಿ ಇಲ್ಲಿದೆ. ಕ್ಲಿಕ್ ಮಾಡಿ ಶಿವಮೊಗ್ಗ ಪೊಲೀಸರಿಂದ ಶಂಕಿತ ಉಗ್ರನ ಪತ್ನಿ ಅರೆಸ್ಟ್, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200