ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021
ದೀಪಾವಳಿ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು ಪುನಃ ಪೆಟ್ರೋಲ್ ದರ ಹೆಚ್ಚಳವಾಗಿದೆ.
ಶಿವಮೊಗ್ಗದಲ್ಲಿ ಇವತ್ತು ಪೆಟ್ರೋಲ್ ಪ್ರತಿ ಲೀಟರ್’ಗೆ 38 ಪೈಸೆ ಹೆಚ್ಚಳವಾಗಿದೆ. ಆದ್ದರಿಂದ ಇವತ್ತು ಪೆಟ್ರೋಲ್ ಪ್ರತಿ ಲೀಟರ್ 115.52 ರೂ.ಗೆ ತಲುಪಿದೆ.
ಇನ್ನು ಡಿಸೇಲ್ ದರ ನವೆಂಬರ್ 1ರಂದು ಹೆಚ್ಚಳವಾಗಿದೆ. ನಿನ್ನೆ 54 ಪೈಸೆ ಏರಿಕೆಯಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಡಿಸೇಲ್ ದರ 105.86 ರೂ.ಗೆ ತಲುಪಿದೆ.
ಅಕ್ಟೋಬರ್ ತಿಂಗಳಲ್ಲಿ ಭಾರಿ ಏರಿಕೆ
ಅಕ್ಟೋಬರ್ ತಿಂಗಳಲ್ಲಿ ಪ್ರತಿ ದಿನದಂತೆ ಪೆಟ್ರೋಲ್, ಡಿಸೇಲ್ ಬೆಲೆ ದುಬಾರಿಯಾಗಿದೆ. ಪ್ರತಿ ಭಾರಿ 36 ಅಥವಾ 37 ಪೈಸೆಯಂತೆ ದರ ಹೆಚ್ಚಳವಾಗುತ್ತಿದೆ. ಹಾಗಾಗಿ ಕಳೆದ ತಿಂಗಳು ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 7.97 ರೂ. ಹೆಚ್ಚಳವಾಗಿದೆ.
ಇನ್ನು, ಕಳೆದ ತಿಂಗಳು ಪೆಟ್ರೋಲ್’ಗಿಂತಲೂ ಡಿಸೇಲ್ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳು ಡಿಸೇಲ್ ದರ ಪ್ರತಿ ಲೀಟರ್’ಗೆ 8.71 ರೂ. ಹೆಚ್ಚಳವಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






