ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ನವೆಂಬರ್ 2021
ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರ್.ಎಂ.ಅಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ.
ಟಿಪ್ಪುನಗರದ ಜಿಕ್ರುಲ್ಲಾ ಮತ್ತು ಅಪ್ರಾಪ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.