ಭದ್ರಾವತಿಯ ಒಂದೇ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 ನವೆಂಬರ್ 2021

ಬೆಳಗಿನ ಜಾವ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್, ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆ 1 : ಬಸ್ ಇಳಿದವರ ಮೇಲೆ ದಾಳಿ

ಬೆಂಗಳೂರಿನಿಂದ ಸರ್ಕಾರಿ ಬಸ್ಸಿನಲ್ಲಿ ಆಗಮಿಸಿದ ಪರಶುರಾಮ ಎಂಬುವವರು ಬೆಳಗ್ಗೆ 4 ಗಂಟೆ ಹೊತ್ತಿಗೆ ಭದ್ರಾವತಿ ನಗರಸಭೆ ಬಳಿ ಇಳಿದುಕೊಂಡಿದ್ದಾರೆ. ಆಸ್ಪತ್ರೆ ಕ್ರಾಸ್ ಬಳಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪರಶುರಾಮ ಅವರನ್ನು ತಡೆದು ತರೀಕರೆಗೆ ಹೇಗೆ ಹೋಗಬೇಕು ಎಂದು ಕೇಳಿದ್ದಾರೆ. ಬಳಿಕ ಚಾಕು ತೋರಿಸಿ ಒಂದು ಮೊಬೈಲ್, ಜೇಬಿನಲ್ಲಿದ್ದ 10,220 ರೂ. ನಗದು, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಘಟನೆಯಲ್ಲಿ ಪರಶುರಾಮ ಅವರ ಕೈಗೆ ಚಾಕುವಿನಿಂದ ಗಾಯಗೊಳಿಸಿದ್ದಾರೆ.

ಘಟನೆ 2 : ಮಾಂಗಲ್ಯ ಸರ ಅರ್ಧ ಕಟ್

ಬಳ್ಳಾರಿಯಿಂದ ಬಸ್ಸಿನಲ್ಲಿ ಭದ್ರಾವತಿಗೆ ಆಗಮಿಸಿದ್ದ ಉಮಾವತಿ ಎಂಬುವವರು ಎನ್.ಎಸ್.ಟಿ ಅಂಗಡಿ ಬಳಿ ನಡೆದುಕೊಂಡು ಹೋಗುತ್ತಿದ್ದರು. ಬೆಳಗ್ಗೆ 4.15ರ ಹೊತ್ತಿಗೆ ಬೈಕಿನಲ್ಲಿ ಬಂದ ಮೂವರು ಯುವಕರು, ಸಾಗರಕ್ಕೆ ಹೇಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಬಳಿಕ ಬೈಕಿನಲ್ಲಿದ್ದ ಒಬ್ಬಾತ ಚಾಕು ತೋರಿಸಿ ಮಹಿಳೆಯ ಮಾಂಗಲ್ಯ ಸರಕ್ಕೆ ಕೈ ಹಾಕಿದ್ದಾನೆ. ಆಗ ಉಮಾವತಿ ಅವರು ಮಾಂಗಲ್ಯ ಸರವನ್ನು ಹಿಡಿದುಕೊಂಡಿದ್ದಾರೆ. ಇದರಿಂದ ಕುಪಿತರಾದ ಉಳಿದ ಇಬ್ಬರು ಉಮಾವತಿ ಅವರು ತಳ್ಳಿದ್ದಾರೆ. ಕೆಳಗೆ ಬಿದ್ದ ಉಮಾವತಿ ಅವರ ಮೊಣಕೈಗೆ ಗಾಯವಾಗಿದೆ. ಮಾಂಗಲ್ಯ ಸರ ತುಂಡಾಗಿದ್ದು ಅರ್ಧ ಭಾಗವನ್ನು ಕಳ್ಳರು ಕಸಿದುಕೊಂಡು ಹೋಗಿದ್ದಾರೆ. 10 ರಿಂದ 12 ಗ್ರಾಂನಷ್ಟು ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ. ಇದರ ಮೌಲ್ಯದ ಸುಮಾರು 30 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಘಟನೆ 3 : ಕೊರಿಯರ್ ಸರ್ವಿಸ್’ನವರ ಮೇಲೆ ಹಲ್ಲೆ

ರಘು ಎಂಬುವವರು ತರೀಕೆರೆ ರಸ್ತೆಯಲ್ಲಿರುವ ಇ-ಕಾಮ್ ಎಕ್ಸ್ ಪ್ರೆಸ್ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಳಗ್ಗೆ 3 ಗಂಟೆಗೆ ಲೋಡ್ ಬಂದಿದ್ದರಿಂದ ಕಚೇರಿಗೆ ತೆರಳಿ ಅನ್ ಲೋಡ್ ಮಾಡಿಸಿ, ರಿಪೋರ್ಟ್ ಬರೆಯುತ್ತಿದ್ದರು. ಆಗ ಬೈಕಿನಲ್ಲಿ ಬಂದ ಮೂವರು ಯುವಕರು ‘ಇದು ಫ್ಲಿಪ್ ಕಾರ್ಟ್ ಕೊರಿಯರ್ ಸಂಸ್ಥೆನಾ’ ಎಂದು ವಿಚಾರಿಸಿದ್ದಾರೆ. ಇಲ್ಲ ಎಂದು ಹೇಳುವಷ್ಟರಲ್ಲಿ ಒಬ್ಬಾತ ಬಂದು ರಘು ಕಚೇರಿ ಒಳ ಬಂದು ಟೇಬಲ್ ಮೇಲಿದ್ದ ಮೊಬೈಲ್ ಎತ್ತುಕೊಂಡಿದ್ದಾನೆ. ಇದನ್ನು ತಡೆಯಲು ಮುಂದಾದಾಗ ರಘ ಅವರಿಗೆ ಚಾಕು ಚುಚ್ಚಲು ಮುಂದಾಗಿದ್ದಾನೆ. ದಾಳಿ ತಪ್ಪಿಸಿಕೊಳ್ಳಲು ಕೈ ಅಡ್ಡ ಹಿಡಿದಿದ್ದರಿಂದ ರಘು ಅವರ ಬೆರಳಿಗೆ ಗಾಯವಾಗಿದೆ. ಜೊತೆಯಲ್ಲಿದ್ದ ಇನ್ನಿಬ್ಬರು ದುಷ್ಕರ್ಮಿಗಳು ಕಚೇರಿ ಬಳಿ ಬಂದು ರಘು ಅವರನ್ನು ಹಿಡಿದುಕೊಂಡು ಮೂರು ಸಾವಿರ ನಗದು ಕಸಿದುಕೊಂಡಿದ್ದಾರೆ.

Bhadravathi Old Town Police Station

ಈ ವೇಳೆ ರಘು ಅವರು ಒಬ್ಬ ದುಷ್ಕರ್ಮಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಕುಪಿತಗೊಂ ಉಳಿದ ಇಬ್ಬರು, ರಘು ಅವರ ಮೇಲೆ ಕಲ್ಲು ಬೀಸಿದ್ದಾರೆ. ಆದರೆ ಆ ಕಲ್ಲು ರಘು ಅವರು ಹಿಡಿದುಕೊಂಡಿದ್ದ ದುಷ್ಕರ್ಮಿಯ ಕಾಲಿನ ಮೇಲೆ ಬಿದ್ದಿದೆ. ಆಗ ರಘು ಅವರ ಮೊಬೈಲ್ ಹಿಂತಿರುಗಿಸಿ, ಮೂವರು ರಘು ಅವರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಬೆಳಗಿನ ಜಾವ 4.25ರ ಹೊತ್ತಿಗೆ ಘಟನೆ ಸಂಭವಿಸಿದೆ.

ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಈ ಕೃತ್ಯಗಳನ್ನು ಎಸಗಿದ್ದಾರೆ. ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

1635994543177831 0

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment