ಭದ್ರಾವತಿ ರೈಲ್ವೆ ಸೇತುವೆ ಮುಂದಿರುವ ಡಾ.ಅಂಬೇಡ್ಕರ್ ಪ್ರತಿಮೆ ಬದಲಾವಣೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ನವೆಂಬರ್ 2021

ಭದ್ರಾವತಿಯಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಯನ್ನು ಬದಲಾಯಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈಗಿರುವ ಪ್ರತಿಮೆ ತೆರವು ಮಾಡಿ, ಹೊಸ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಡಿಎಸ್ಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಸಂಬಂಧ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಮನವಿ ಸಲ್ಲಿಸಿದ ಡಿಎಸ್ಎಸ್ ಕಾರ್ಯಕರ್ತರು, ಅತಿ ಶೀಘ್ರದಲ್ಲಿ ಹೊಸ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಬದಲಾವಣೆ ಯಾಕೆ?

ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 2007ರಲ್ಲಿ ರೈಲ್ವೆ ಸೇತುವೆ ಮುಂದೆ ಡಾ.ಅಂಬೇಡ್ಕರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು.

(ಆಗಿಂದಾಗ್ಗೆ ಆರೋಗ್ಯ ತಪಾಸಣೆ ಅವಶ್ಯ. ಪರಿಣಿತ ವೈದ್ಯರು, ನುರಿತ ತಜ್ಞರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಈ ಪ್ರತಿಮೆಯು ಕೇವಲ 6 ಅಡಿಯಷ್ಟಿದೆ. ಇದು ಕುಬ್ಜವಾಗಿದ್ದು  ಪ್ರತಿಮೆಯನ್ನು ಬದಲಾಯಿಸಬೇಕು. ಇಲ್ಲಿ 12 ಅಡಿ ಎತ್ತರದ ಆಕರ್ಷಕ ಪ್ರತಿಮೆ ಪ್ರತಿಷ್ಠಾಪಿಸಬೇಕು. ಈ ಬಗ್ಗೆ ಹಲವು ಭಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಡಿಎಸ್ಎಸ್ ಮುಖಂಡರು ಆರೋಪಿಸಿದರು.

‘ಹೊಸ ಪ್ರತಿಮೆ ಪ್ರತಿಷ್ಠಾಪನೆಯಾಗುತ್ತೆ’

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೇಶ್ವರ್, ಸರ್ಕಾರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಆದರೂ ಯಾವುದಾದರೂ ಅನುದಾನ ಹೊಂದಿಸಿ ಡಾ.ಅಂಬೇಡ್ಕರ್ ಅವರ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

(ಶಿವಮೊಗ್ಗದಲ್ಲಿ ಇದೇ ಮೊದಲು – ಲೈವ್ ಕಿಚಿನ್, ಏಳು ನಿಮಿಷದಲ್ಲಿ ರೆಡಿಯಾಗುತೆ ಕೇಕ್ – ಈಗಲೆ ಫೋನ್ ಮಾಡಿ, ನಿಮ್ಮ ಆರ್ಡರ್ ಬುಕ್ ಮಾಡಿ)

1635994543177831 0

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment