ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021

ತಮ್ಮ ಪ್ರೀತಿಗೆ ಜಾತಿ ಅಡ್ಡಿಯಾದ ಹಿನ್ನೆಲೆ ಶಿವಮೊಗ್ಗ ತಾಲೂಕು ಚೋರಡಿಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ತಾಲೂಕು ರಾಮನಗರದ ಯುವಕ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ಇಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗುವ ಹಿನ್ನೆಲೆ ಪ್ರೇಮಿಗಳಿಬ್ಬರೂ ಚೋರಡಿ ಸಮೀಪದ ಕರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಇದನ್ನು ಗಮನಿಸಿದ ಸ್ಥಳೀಯರು ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಚೇತರಿಸಿಕೊಂಡಿದ್ದಾಳೆ. ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment