ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ, ಡಿಸೆಂಬರ್ 16ರವರೆಗೆ ಕಟ್ಟುನಿಟ್ಟು ಪಾಲನೆ, ಶಿವಮೊಗ್ಗದಲ್ಲಿ ಎಷ್ಟಿದ್ದಾರೆ ಮತದಾರರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಅದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದರು.

ಚುನಾವಣೆಗೆ ಯಾರೆಲ್ಲ ಮತದಾರರು?

ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾರರಾಗಿರುತ್ತಾರೆ. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯವನ್ನು ನಿಗದಿತ ನಮೂನೆಯಲ್ಲಿ ಕೈಗೊಂಡು ಅರ್ಹ ಮತದಾರರ ವಿವರಗಳನ್ನು ತಕ್ಷಣ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದರು.

(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಿವಮೊಗ್ಗದ ಏಳು, ದಾವಣಗೆರೆಯ ಮೂರು ತಾಲೂಕು

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ 3 ತಾಲೂಕುಗಳು ಪ್ರಸ್ತುತ ಚುನಾವಣೆಯ ವ್ಯಾಪ್ತಿಯಲ್ಲಿದ್ದು, ಒಟ್ಟು 4129 ಮತದಾರರು ಇದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ 23 ಪುರಸಭೆ ಸದಸ್ಯರು ಹಾಗೂ 732 ಗ್ರಾಮ ಪಂಚಾಯತಿ ಸದಸ್ಯರು,

ಹೊನ್ನಾಳಿ ತಾಲೂಕಿನ 18 ಪುರಸಭೆ ಹಾಗೂ 323 ಗ್ರಾ.ಪಂ ಸದಸ್ಯರು,

ನ್ಯಾಮತಿ ತಾಲೂಕಿನ 190 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಒಟ್ಟು 41 ಪುರಸಭೆ ಸದಸ್ಯರು ಹಾಗೂ 1245 ಗ್ರಾ.ಪಂ ಸದಸ್ಯರು ಸೇರಿದಂತೆ 1286 ಮತದಾರರು ಇದ್ದಾರೆ.

ಶಿವಮೊಗ್ಗ ತಾಲೂಕಿನಲ್ಲಿ ಮಹಾನಗರ ಪಾಲಿಕೆಯ 35 ಸದಸ್ಯರು ಹಾಗೂ 456 ಗ್ರಾ.ಪಂ ಸದಸ್ಯರು,

ಭದ್ರಾವತಿ ತಾಲೂಕಿನ ನಗರಸಭೆಯ 35 ಸದಸ್ಯರು, 441 ಗ್ರಾ.ಪಂ ಸದಸ್ಯರು,

ADVT JULY NANJAPPA HOSPITAL HOME LAB TESTING

ಸಾಗರ ತಾಲೂಕಿನ 31 ನಗರ ಸಭೆ ಸದಸ್ಯರು, 11 ಪಟ್ಟಣ ಪಂಚಾಯತ್ ಸದಸ್ಯರು, 368 ಗ್ರಾ.ಪಂ ಸದಸ್ಯರು,

ಶಿಕಾರಿಪುರ ತಾಲೂಕಿನ 23 ಪುರಸಭೆ ಸದಸ್ಯರು, 17 ಪಟ್ಟಣ ಪಂಚಾಯತ್ ಸದಸ್ಯರು ಹಾಗೂ 453 ಗ್ರಾ.ಪಂ ಸದಸ್ಯರು,

ತೀರ್ಥಹಳ್ಳಿ ತಾಲೂಕಿನ 15 ಪಟ್ಟಣ ಪಂಚಾಯತ್ ಸದಸ್ಯರು ಮತ್ತು 336 ಗ್ರಾಮ ಪಂಚಾಯತ್ ಸದಸ್ಯರು,

SHIVAMOGGA LIVE CONTATCT

ಸೊರಬ ತಾಲೂಕಿನ 12 ಪ.ಪಂ ಸದಸ್ಯರು ಮತ್ತು 304 ಗ್ರಾ.ಪಂ ಸದಸ್ಯರು

ಹೊಸನಗರ ತಾಲೂಕಿನ 11 ಪ.ಪಂ ಸದಸ್ಯರು ಹಾಗೂ 295 ಗ್ರಾ.ಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 2653 ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ 2843 ಮತದಾರರು ಇದ್ದಾರೆ. ಒಟ್ಟಾರೆಯಾಗಿ ಚುನಾವಣೆಯಲ್ಲಿ ಗ್ರಾಮ ಪಂಚಾಯತ್‍ನ 3898 ಸದಸ್ಯರು ಸೇರಿದಂತೆ 4129 ಮತದಾರರು ಮತದಾನದ ಅವಕಾಶ ಹೊಂದಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಪ್ರಕಾಶ್, ಸಾಗರ ಉಪವಿಭಾಗಾಧಿಕಾರಿ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment