ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021
ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ.
ನಟ ಪುನೀತ್ ಹೆಸರು ಇಟ್ಟಿದ್ದೇಕೆ?
ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು ಹೊತ್ತು ಕಳೆದಿದ್ದರು. ಅದನ್ನು ಮುದ್ದಾಡಿದ್ದರು. ಹಾಗಾಗಿ ಅವರ ಹೆಸರನ್ನೆ ಆನೆಗೆ ಇಡಲಾಗಿದೆ.
‘ಆನೆಗೆ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ’ ಎಂದು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್ಒ ಐ.ಎಂ.ನಾಗರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇವತ್ತಿಂದ ತಾಯಿ, ಮಗ ದೂರ ದೂರ
ನೇತ್ರಾವತಿ ಮತ್ತು ಅದರ ಮರಿ ಪುನೀತ್ ಇವತ್ತಿನಿಂದ ದೂರ ದೂರ ಉಳಿಯಬೇಕಿದೆ. ಈವರೆಗೂ ತಾಯಿ ಹಾಲು ಕುಡಿಯಲು ಮರಿ ಆನೆಗೆ ಅವಕಾಶವಿತ್ತು. ಆದರೆ ಇನ್ಮುಂದೆ ಮರಿ ಆನೆ ಪುನೀತ್, ಸ್ವತಂತ್ರವಾಗಿ ಬದುಕಬೇಕಿದೆ. ಹಾಗಾಗಿ ತಾಯಿ ಮತ್ತು ಮರಿಯನ್ನು ಬೇರ್ಪಡಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯಲಾಗುತ್ತದೆ.

ತಾಯಿ ಆನೆಯನ್ನು ಕಾಡಿನಲ್ಲಿ ಬಿಡಲಾಗುತ್ತದೆ. ಮರಿ ಆನೆಯನ್ನು ಬಿಡಾರದಲ್ಲಿ ಕಟ್ಟಲಾಗುತ್ತದೆ. ಆದರೆ ತಾಯಿ ಜೊತೆಗೆ ಬೆರೆಯಲು, ಹಾಲು ಕುಡಿಯುವಂತಿಲ್ಲ. ಬಿಡಾರದ ಉಳಿದ ಆನೆಗಳಿಗೆ ನೀಡುವ ಆಹಾರವನ್ನೇ ಮರಿ ಆನೆ ಪುನೀತ್’ಗೂ ನೀಡಲಾಗುತ್ತದೆ. ವೀನಿಂಗ್ ಪ್ರಕ್ರಿಯೆ ಇವತ್ತು ಆರಂಭವಾಗಿದ್ದು, ಹಂತ ಹಂತವಾಗಿ ಮರಿಯಾನೆಯನ್ನು ತರಬೇತುಗೊಳಿಸಲಾಗುತ್ತದೆ.
ವೀನಿಂಗ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಕ್ರೆಬೈಲು ಬಿಡಾರಕ್ಕೆ ಇವತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.
ಇದನ್ನೂ ಓದಿ | ಸಕ್ರೆಬೈಲು ಆನೆ ಬಿಡಾರದಲ್ಲಿ ಶೂಟಿಂಗ್, ಪುನಿತ್ ರಾಜ್ ಕುಮಾರ್ ಭಾಗಿ, ತುಂಗಾ ಡ್ಯಾಂಗೂ ಭೇಟಿ
ಇದನ್ನೂ ಓದಿ | ‘ತೀರ್ಥಹಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಮೇಲೆ ಜೇನುಗಳು ದಾಳಿ ಮಾಡಿದ್ದವು, ಸಿನಿಮಾದಲ್ಲಿ ಅದು ಗೊತ್ತಾಗುತ್ತೆ’
ಇದನ್ನೂ ಓದಿ | ಶಿವಮೊಗ್ಗಕ್ಕೆ ಪುನಿತ್ ರಾಜ್ ಕುಮಾರ್ ಕೊನೆಯ ಭೇಟಿ, ಅಭಿಮಾನಿಗಳಿಗೆ ಫೋಟೊ, ಸೆಲ್ಫಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






