ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021
ವೇಗವಾಗಿ ಬಂದ ಬೈಕೊಂದು ಪಾದಚಾರಿಯೊಬ್ಬರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪಾದಚಾರಿಯ ತಲೆ ಮೇಲೆ ಅದೇ ದಾರಿಯಲ್ಲಿ ಬಂದ ಕಾರಿನ ಚಕ್ರ ಹತ್ತಿದೆ. ಗಂಭೀರ ಗಾಯಗೊಂಡಿದ್ದ ಪಾದಚಾರಿಯು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ತಾಲೂಕು ಹೊಸಳ್ಳಿಯಲ್ಲಿ ಘಟನೆ ಸಂಭವಿಸಿದೆ. ಗೋಣೆಪ್ಪ, ಪರಶುರಾಮ, ಮಂಗಳಮ್ಮ ಎಂಬುವವರು ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದಾಗ ಅಪಘಾತವಾಗಿದೆ.
ಹೇಗಾಯ್ತು ಅಪಘಾತ?
ಶಿವಮೊಗ – ತೀರ್ಥಹಳ್ಳಿ ರಸ್ತೆಯ ಪಕ್ಕದಲ್ಲಿ ಮೂವರು ನಡೆದುಕೊಂಡು ಹೋಗುತ್ತಿದ್ದರು. ಗಾಜನೂರು ಕಡೆಯಿಂದ ಬಂದ ಬೈಕ್ ಗೋಣೆಪ್ಪ (28) ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಬೈಕು ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಗೋಣೆಪ್ಪ ರಸ್ತೆಗೆ ಮೇಲೆ ಬಿದ್ದಿದ್ದಾರೆ. ಅದೆ ಹೊತ್ತಿಗೆ ಬೈಕಿನ ಹಿಂಭಾಗದಲ್ಲೆ ಬರುತ್ತಿದ್ದ ಓಮ್ನಿ ಕಾರು ಗೋಣೆಪ್ಪನ ತಲೆ ಮೇಲೆ ಹತ್ತಿದೆ.
ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೋಣೆಪ್ಪ ಅವರನ್ನು ಕೂಡಲೆ ಮಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗೋಣೆಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಹೊಸಳ್ಳಿ ಜನರಿಗೆ ನಿತ್ಯ ಭಯ
ಶಿವಮೊಗ್ಗ – ತೀರ್ಥಹಳ್ಳಿ ಹೈವೇ ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತವೆ. ಹೊಸಳ್ಳಿ ಸೇರಿದಂತೆ ಈ ಭಾಗದ ಜನರು ಹೈವೇ ರಸ್ತೆಗೆ ಬರಲು ಹೆದರುತ್ತಾರೆ. ಅಪಘಾತಗಳು ಇಲ್ಲಿ ಸರ್ವೆ ಸಾಮಾನ್ಯ ಎಂಬಂತಾಗಿದೆ.
ಘಟನೆ ಸಂಬಂಧ ಬೈಕ್ ಚಾಲಕ ಮತ್ತು ಕಾರು ಚಾಲಕನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






