ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ತಾಲೂಕು ಆಲದಹಳ್ಳಿಯ ಸಮುದಾಯ ಭವನದಲ್ಲಿ ಇವತ್ತು ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಎರಡು ಜೋಡಿ ಸಪ್ತಪದಿ ತುಳಿದಿವೆ. ಮಹೂರ್ತ ಮುಗಿಯುತ್ತಿದ್ದಂತೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಊಟವಾಗುತ್ತಿದ್ದಂತೆ ಹಲವರು ಅಸ್ವಸ್ಥ
ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಹೊಳಲೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ವಾಂತಿ, ಭೇದಿ, ತಲೆನೋವು ಸೇರಿದಂತೆ ಹಲವು ಸಮಸ್ಯೆ ಹೆಚ್ಚಾದ ಹಿನ್ನೆಲೆ ಕೆಲವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದುವೆ ಮನೆಗೆ ಅಧಿಕಾರಿಗಳು ದೌಡು
ಇನ್ನು, ವಿಚಾರ ತಿಳಿಯುತ್ತಿದ್ದಂತೆ ಮದುವೆ ಮನೆಗೆ ಅಧಿಕಾರಿಗಳು ದೌಡಾಯಿಸಿದ್ದಾರೆ. ತಯಾರಿಸಿದ್ದ ಆಹಾರ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅವುಗಳನ್ನು ಲ್ಯಾಬ್’ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






