ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ವೀಕೆಂಡ್ ಮೂಡ್’ನಲ್ಲಿದ್ದವರು ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು, ಭಾರಿ ಮಳೆ ಜಿಲ್ಲೆಯ ರೈತರಲ್ಲಿ ಆತಂಕ ಮೂಡಿಸಿದೆ.
ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗ ಶಿವಮೊಗ್ಗದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗಳಲ್ಲೂ ನೀರು ತುಂಬಿಕೊಂಡಿವೆ.
ಭಾರಿ ಮಳೆಯಿಂದಾಗಿ ಶಿವಮೊಗ್ಗದಲ್ಲಿ ಜನ ಮತ್ತು ವಾಹನ ಸಂಚಾರ ಕಷ್ಟಕರವಾಗಿದೆ. ವೀಕೆಂಡ್ ಮೂಡ್’ನಲ್ಲಿದ್ದವರಿಗೆ ಮಳೆ ತಣ್ಣೀರು ಎರಚಿದೆ. ಭಾನುವಾರದ ವ್ಯಾಪಾರಕ್ಕಾಗಿ ಸಿದ್ಧವಾಗಿದ್ದ ಚಾಟ್ಸ್, ತಿಂಡಿ, ತಿನಿಸು ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಲಷ್ಕರ್ ಮೊಹ್ಲಲಾದಲ್ಲಿ ಚರಂಡಿಗಳು ಭರ್ತಿಯಾಗಿ, ರಸ್ತೆ ಮೇಲೆ ನೀರು ಹರಿಯುತ್ತಿದೆ. ಇಲ್ಲಿನ ಮನೆಗಳು, ಮಳಿಗೆಗಳ ಒಳಗೆ ನುಗ್ಗಿರುವ ನೀರನ್ನು ಹೊರಗೆ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.
ರೈತರಲ್ಲಿ ಆತಂಕ ಮೂಡಿಸಿದ ಮಳೆ
ಭಾರಿ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಬೆಳೆದು ನಿಂತ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಜೋಳ, ಭತ್ತ, ಅಡಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ಭಾರಿ ಮಳೆಗೆ ಮರದಿಂದ ಅಡಕೆ ಉದುರುತ್ತಿವೆ. ಇನ್ನು, ಅಡಕೆ ಕೊಯ್ಲು ಮುಗಿಸಿದ ಬೆಳೆಗಾರರು ಅದನ್ನು ಒಣಗಿಸಲು ಹರಸಾಹಸ ಪಡಬೇಕಾಗಿದೆ.
ಇತ್ತ ಬೆಳೆದು ನಿಂತ ಜೋಳು ಕಟಾವು ಮಾಡದೆ ಉಳಿಸಿಕೊಂಡ ರೈತರು ಕೂಡ ಆತಂಕದಲ್ಲಿದ್ದಾರೆ. ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಭತ್ತ ಬೆಳೆಗಾರರು ಕೂಡ ಈ ಮಳೆಯಿಂದಾಗಿ ಬೆಳೆ ಕೈತಪ್ಪುವ ಆತಂಕದಲ್ಲಿದ್ದಾರೆ.