ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ನವೆಂಬರ್ 2021
ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಜಾತ್ರೆಗೆ ದಿನಾಂಕ ನಿಗದಿಯಾಗಿದೆ. ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗಿದೆ. ಈಗಾಗಲೆ ಇದರ ಪೋಸ್ಟರ್ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
2022ರ ಫೆಬ್ರವರಿ 22 ರಿಂದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಲಿದೆ. ಫೆ.26ರವರೆಗೆ ಜಾತ್ರೆ ನಡೆಯಲಿದೆ. ಐದು ದಿನ ಅತ್ಯಂತ ವಿಜೃಂಭಣೆಯಿಂದ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ.
ಇವತ್ತು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿಯ ಸಭೆ ನಡೆದಿದ್ದು, ಜಾತ್ರೆ ದಿನಾಂಕವನ್ನು ನಿಗದಪಡಿಸಲಾಗಿದೆ. ಈ ಸಂಬಂಧ ದೇವಸ್ಥಾನದ ಭಕ್ತರಿಗೆ ಮುಂಚಿತವಾಗಿ ಮಾಹಿತಿ ತಲುಪಿಸುವ ಉದ್ದೇಶದಿಂದ ದೇಗುಲದ ಮುಂದೆ ಪೋಸ್ಟರ್ ಪ್ರಕಟಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್
ಜಾತ್ರೆ ಕುರಿತು ಮಾಹಿತಿ ನೀಡಲು ಸಿದ್ಧಪಡಿಸಿದ್ದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜನರು ವಾಟ್ಸಪ್ ಸ್ಟೇಟಸ್, ಫೇಸ್ ಬುಕ್’ನಲ್ಲಿ ಪೋಸ್ಟರ್ ಪ್ರಕಟಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ಅತ್ಯಂತ ಪ್ರಮುಖ ಜಾತ್ರೆ ಇದಾಗಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಸಂದರ್ಭ ದೂರದ ಊರುಗಳಿಂದ ಜನರು ಬಂದು ಪಾಲ್ಗೊಳ್ಳುತ್ತಾರೆ.