ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021
ಯುವ ಕಾಂಗ್ರೆಸಿನ ಅನೇಕರು ನನಗೆ ಕರೆ ಮಾಡಿ ತಮ್ಮ ಅಧ್ಯಕ್ಷರ ಚುನಾವಣೆಯಲ್ಲಿ ನಡೆದ ಹ್ಯಾಕಿಂಗ್ ಆಗಿರುವ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಶ್ರೀಕಿ ಹ್ಯಾಕಿಂಗ್ ಕುರಿತು ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್’ನ ಕೆಲವರು ಕರೆ ಮಾಡಿ ತಮ್ಮ ಅಧ್ಯಕ್ಷರ ಚನಾವಣೆ ಸಂದರ್ಭದಲ್ಲಿ ಹ್ಯಾಕಿಂಗ್ ಆಗಿರುವ ಸಾಧ್ಯತೆ ಇದೆ. ಇದನ್ನು ತನಿಖೆ ಮಾಡಿಸಲು ಸಾಧ್ಯವಾಗಲಿದೆಯೇ ಎಂದು ಕೇಳಿದ್ದರು. ದೂರು ನೀಡುವಂತೆ ನಾನು ತಿಳಿಸಿದ್ದೇನೆ ಎಂದರು.
‘ಡಿಕೆಶಿ ಮಾನಸಿಕ ಸ್ಥಿತಿ ಪರೀಕ್ಷಿಸಬೇಕು’
ಇನ್ನು, ಕಾಂಗ್ರೆಸ್ ಪಕ್ಷದ ರಾಜ್ಯಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮಾನಸಿಕ ಸ್ಥಿತಿ ಕುರಿತು ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆರಗ ಜ್ಞಾನೇಂದ್ರ, ಡಿ.ಕೆ.ಶಿವಕುಮಾರ್ ಅವರ ಮಾನಸಿಕ ಸ್ಥಿತಿಯನ್ನೇ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.