ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ANANDAPURAM NEWS | 19 ನವೆಂಬರ್ 2021
ತರಕಾರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಲ್ಲಿನ ಹಳೇ ಸಂತೆ ಮಾರುಕಟ್ಟೆಯ ಮಹೇಶ್ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಳೇ ಸಂತೆ ಮಾರುಕಟ್ಟೆಯಲ್ಲಿ ಮಹೇಶ್ ತರಕಾರಿ ಅಂಗಡಿ ಇಟ್ಟುಕೊಂಡಿದ್ದರು. ವ್ಯಾಪಾರದಲ್ಲಿ ನಷ್ಟವಾಗಿತ್ತು. ಇನ್ನು, ಕಳೆದ ವರ್ಷ ಕರೋನಾದಿಂದ ಮಹೇಶ್ ಅವರ ತಾಯಿ ಮೃತರಾಗಿದ್ದರು. ಇದರಿಂದ ಮಹೇಶ್ ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















