ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021
ಕಳೆದೊಂದು ವಾರದಿಂದ ಸುರಿದ ಭಾರಿ ಮಳೆ ಪರಿಣಾಮ ಶಿವಮೊಗ್ಗದಲ್ಲಿ ಮನೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲ ಹೊರೆಗೆ ಓಡಿ ಬಂದಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ.
ಶಿವಮೊಗ್ಗದ ಗೋಪಾಳ ಸಮೀಪ ವಿಕಾಸ ಶಾಲೆ ಬಳಿ ಹೆಂಚಿನ ಮನೆಯೊಂದರ ಗೋಡೆಗಳು ಕುಸಿದಿವೆ. ಬಸವರಾಜು ಎಂಬುವವರಿಗೆ ಸೇರಿದ ಮನೆ ಸಂಪೂರ್ಣ ಗೋಡೆಗಳು ಕುಸಿದಿವೆ. ಮೇಲ್ಛಾವಣಿ ಮುರಿದು ಬಿದ್ದಿದೆ. ಘಟನೆಯಲ್ಲಿ ಎರಡು ಕುಟಂಬಗಳು ಪ್ರಾಣಪಾಯದಿಂದ ಪಾರಾಗಿವೆ.
ಹೇಗಾಯ್ತು ಘಟನೆ?
ಮಧ್ಯಾಹ್ನ ಜೋರು ಶಬ್ದವಾಗಿದೆ. ಮಕ್ಕಳು, ಹಿರಿಯರು ಸೇರಿ ಸುಮಾರು ಒಂಭತ್ತು ಮಂದಿ ಈ ಸಂದರ್ಭ ಮನೆಯಲ್ಲಿದ್ದರು. ಆತಂಕದಲ್ಲೆ ಎಲ್ಲರೂ ಹೊರಗೆ ಓಡಿ ಬರುತ್ತಿದ್ದಂತೆ ಮನೆ ಗೋಡೆ ಕುಸಿದಿದೆ. ಮನೆಯೊಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















