ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021

ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ.

ADVT JULY NANJAPPA HOSPITAL HOME LAB TESTING

ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಹೇಗಾಯ್ತು ಘಟನೆ?

ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದರು. ದಿನೇಶ್ ಸಿಂಗ್ ಅವರು ಕೂಡ ಮದುವೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದರು. ಅಸ್ವಸ್ಥರಾಗಿದ್ದ ದಿನೇಶ್ ಸಿಂಗ್ ಅವರು ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ | 150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

ಚಿಕಿತ್ಸೆ ಬಳಿಕ ದಿನೇಶ್ ಸಿಂಗ್ ಅವರು ಮನೆಗೆ ಮರಳಿದ್ದರು. ಆದರೆ ದಿಢೀರ್ ಆರೋಗ್ಯ ಕೈಕೊಟ್ಟಿದೆ. ಹಾಗಾಗಿ ದಿನೇಶ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ.

AVvXsEgCK6BzwpmLKN3Qq9VEyfBxPsUM qcgTQ5uE3XAku5QprJ4ykrlffyC M iUUFuKxV24cA7Pp 3jVoOey6TJ6FidA4AHs1KhrKmyMW K8q0274uN8lVvFEWUqILIye OPpLkx3OypL38kR5USeXB ijnMwHcpCeMfcJcML62W39PpYuwb J6ePKBUIY9Q=s150

150ಕ್ಕೂ ಹೆಚ್ಚು ಜನ ಅಸ್ವಸ್ಥ

ಅರದೋಟ್ಲು ಗ್ರಾಮಕ್ಕೆ ಸೇರಿದವರ ಮದುವೆ ಸಮಾರಂಭ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಮದುವೆ ಮನೆಯಲ್ಲಿ ಊಟ ಮಾಡಿದ್ದ 150ಕ್ಕೂ ಅಧಿಕ ಮಂದಿಯಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿತ್ತು. ವಾಂತಿ, ಭೇದಿ, ಜ್ವರ, ಹೊಟ್ಟೆನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆ ಎದುರಾಗಿತ್ತು. ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ ಮತ್ತು ಹಾವೇರಿ ಆಸ್ಪತ್ರೆಗೆ ಹಲವರು ದಾಖಲಾಗಿದ್ದರು. ಎಲ್ಲರೂ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 22, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment