ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ಮಳೆ ಅಬ್ಬರ, ತಗ್ಗು ಪ್ರದೇಶದ ಜನರು, ರೈತರಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021

ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ಮಳೆ ಮರೆಯಾಗಿ ಬಿಸಿಲು ಕಾಣಿಸಿಕೊಂಡಿದ್ದರಿಂದ ಜನರು ನಿರಾಳರಾಗಿದ್ದರು. ಆದರೆ ರಾತ್ರಿಯಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ ಶುರುವಾಗಿದೆ.

ADVT JULY NANJAPPA HOSPITAL HOME LAB TESTING

ಶಿವಮೊಗ್ಗ ನಗರದಲ್ಲಿ ರಾತ್ರಿ ಮಳೆ ಶುರುವಾಗಿದೆ. ಗುಡುಗು ಸಹಿತ ಜೋರು ಮಳೆಯಾಗಿದೆ. ರಾತ್ರಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ.

ಸಾಗರ ತಾಲೂಕಿನಲ್ಲಿ ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡು ಜನರು ನಿರಾಳರಾಗಿದ್ದರು. ಆದರೆ ಸಂಜೆ ವೇಳೆಗೆ ಮತ್ತೆ ಮಳೆ ಸುರಿಯಲು ಆರಂಭಿಸಿದೆ. ರೈತರಲ್ಲಿ ಆತಂಕ ಮೂಡಿದೆ.

ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ತಾಲೂಕಿನ ವಿವಿಧೆಡೆಯೂ ಮಳೆಯಾದ ವರದಿಯಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment