ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA / ANANDAPURAM NEWS | 23 ನವೆಂಬರ್ 2021
ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮನೆಗಳ ಗೋಡೆ ಕುಸಿದು ಅನಾಹುತಗಳು ಸಂಭವಿಸುತ್ತಿವೆ.
ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಪ್ಪ ಎಂಬುವವರಿಗೆ ಸೇರಿದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಗೋಡೆ ಕುಸಿತದಿಂದಾಗಿ ಮನೆಯ ಇತರೆಡೆ ಬಿರುಕು ಕಾಣಿಸಿಕೊಂಡಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ದಿಢೀರ್ ಕುಸಿದ ಮನೆ, ಅದೃಷ್ಟವಶಾತ್ ಪಾರಾಯ್ತು ಎರಡು ಕುಟುಂಬ
ಶಿವಪ್ಪ ಅವರ ಕುಟುಂಬದವರು ಆತಂಕದಲ್ಲಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಆನಂದಪುರದಲ್ಲೂ ಗೋಡೆ ಕುಸಿತ
ಆನಂದಪುರದ ಅಶೋಕ ರಸ್ತೆಯ ರಾಮಣ್ಣ ಎಂಬುವವರ ಮನೆಯ ಹೊರಮುಖದ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುಟುಂಬದವರು ಅಪಾಯದಿಂದ ಪಾರಾಗಿದ್ದಾರೆ. ಜೋರು ಮಳೆಯಿಂದಾಗಿ ಚಾವಣಿಯ ಹೆಂಚು ಒಡೆದು ಗೋಡೆ ಮೇಲೆ ನೀರು ಬೀಳುತ್ತಿತ್ತು. ಗೋಡೆ ಒದ್ದೆಯಾದ ಕಾರಣ ಸಂಪೂರ್ಣ ನೆಲಸಮಯವಾಗಿದೆ.
ಗ್ರಾಮ ಲೆಕ್ಕಾಧಿಕಾರಿ ಆರ್.ಶಂಕರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

LATEST NEWS
- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

About The Editor
ನಿತಿನ್ ಆರ್.ಕೈದೊಟ್ಲು
















