VIDEO NEWS | ಶಿವಮೊಗ್ಗ ವಿದ್ಯಾನಗರದ ಎಸ್’ಬಿಐ ಬ್ಯಾಂಕ್’ನಲ್ಲಿ ಬೆಂಕಿ, ಕ್ಯಾಷ್ ಕೌಂಟರ್ ಭಸ್ಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ನವೆಂಬರ್ 2021

ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಬ್ಯಾಂಕಿನ ಪೀಠೋಪಕರಣ, ದಾಖಲೆಗಳು ಸುಟ್ಟು ಭಸ್ಮವಾಗಿವೆ.

ADVT JULY NANJAPPA HOSPITAL HOME LAB TESTING

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿದ್ಯಾನಗರ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಿಟಕಿಯಿಂದ ಬರುತಿತ್ತು ದಟ್ಟ ಹೊಗೆ

ಭಾನುವಾರ ಅದ್ದರಿಂದ ಬ್ಯಾಂಕ್‌ಗೆ ರಜೆ ಇತ್ತು. ಆದರೆ ಕಿಟಕಿಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಸ್ಥಳೀಯರು ಮತ್ತು ಅಕ್ಕಪಕ್ಕದ ಮನೆಯವರು ಗಮನಿಸಿದ್ದಾರೆ. ಕೂಡಲೆ ಬ್ಯಾಂಕ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕ್ಯಾಷ್ ಕೌಂಟರ್ ಸುಟ್ಟು ಕರಕಲು

ಬ್ಯಾಂಕ್’ನ ಕ್ಯಾಷ್ ಕೌಂಟರ್ ಬಳಿ ಬೆಂಕಿ ಹೊತ್ತುಕೊಂಡಿದೆ. ಇದರ ಹಿಂಭಾಗದಲ್ಲಿಯೇ ಬ್ಯಾಂಕಿನ ಯುಪಿಎಸ್ ವ್ಯವಸ್ಥೆ ಇದೆ. ಬ್ಯಾಟರಿಗಳನ್ನು ಇರಿಸಲಾಗಿದೆ. ಇಲ್ಲಿಯೇ ಬೆಂಕಿ ಶಾರ್ಟ್ ಸರ್ಕಿಟ್ ಸಂಭವಿಸಿರುವ ಸಾಧ್ಯತೆ ಇದೆ. ಇದರಿಂದಾಗಿ ಕ್ಯಾಷ್ ಕೌಂಟರ್ ಸಂಪೂರ್ಣ ಸುಟ್ಟು ಹೋಗಿದೆ. ಇನ್ನು, ಈ ಭಾಗದಲ್ಲಿ ಇರಿಸಲಾಗಿದ್ದ ಕೆಲ ದಾಖಲೆಗಳು ಹಾನಿಯಾಗಿದೆ ಎಂದು ತಿಳಿದುಬಂದಿದೆ. ಉಳಿದಂತೆ ಲಾಕರ್’ಗೆ ಯಾವುದೆ ಸಮಸ್ಯೆಯಾಗಿಲ್ಲ ಎಂದು ಸ್ಥಳದಲ್ಲಿದ್ದ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ವಿಡಿಯೋ ರಿಪೋರ್ಟ್

ಬ್ಯಾಂಕ್ ಬಳಿ ಜನವೋ ಜನ

ಅಗ್ನಿ ಅವಘಡ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಜನರು ಬ್ಯಾಂಕ್ ಬಳಿ ಜಮಾಯಿಸಿದ್ದರು. ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯನ್ನು ಮೊಬೈಲುಗಳಲ್ಲಿ ವಿಡಿಯೋ, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಇನ್ನು, ಬಿ.ಹೆಚ್.ರಸ್ತೆಯಲ್ಲಿ ಓಡಾಡುತ್ತಿದ್ದವರು ತಮ್ಮ ವಾಹನವನ್ನು ನಿಲ್ಲಿಸಿ ಏನಾಗಿದೆ ಎಂದು ವಿಚಾರಿಸುತ್ತಿದ್ದರು. ಇದರಿಂದಾಗಿ ಬ್ಯಾಂಕ್ ಮುಂಭಾಗ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

shivamogga live subscribe band

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment