ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021
ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಒಂದು ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಗಂಧರ್ವ ನಗರದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಟಿಪ್ಪುನಗರದ ತರಾದ ಸಿಖಂದರ್ (23) ಮತ್ತು ಸಯ್ಯದ್ ಆಸಿಫ್ ಅಲಿಯಾಸ್ ತಂಡಾ ಪಾನಿ (30) ಎಂದು ಗುರುತಿಸಲಾಗಿದೆ.
ಬಂಧಿತರಿಂದ 1 ಕೆ.ಜಿ 140 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 64 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















