ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಅಕ್ರಮ ಗೋಸಾಗಣೆ ಹಾಗೂ ಗೋಹತ್ಯೆ ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಯ್ದೆಯಲ್ಲಿ ಇನ್ನಷ್ಟು ಮಾರ್ಪಾಡು ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ತೀರ್ಥಹಳ್ಳಿಯಲ್ಲಿ ಅಕ್ರಮ ಗೋಸಾಗಣೆ ತಡೆಯಲು ಪ್ರಾಣವನ್ನೇ ತೆಗೆಯುವ ಪ್ರಯತ್ನ ನಡೆದಿದೆ. ಗಾಯಾಳು ಯುವಕ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಂತಹ ಘಟನೆಗಳು ನಡೆಯದಂತೆ ಬಿಗಿ ಕಾನೂನು ರೂಪಿಸುವ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ | ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?
ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷದ ನಾಯಕರನ್ನೂ ಎಷ್ಟು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಗೌರವಯುತವಾಗಿ ಸ್ವಾಗತಿಸಿರುವುದೇ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರು ಮೋದಿ ಅವರಿಂದ ನಾಗರಿಕತೆ, ಸಂಸ್ಕಾರ ಕಲಿತುಕೊಳ್ಳಲಿ ಎಂದರು.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





