ತಾಳಗುಪ್ಪದಲ್ಲಿ ಅಪಘಾತ, ಬೈಕ್ ಸವಾರ ದುರ್ಮರಣ, ಮತ್ತೊಬ್ಬ ವ್ಯಕ್ತಿ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಡಿಸೆಂಬರ್ 2021

ತಾಳಗುಪ್ಪದ ಬಲೆಗಾರು ಬಳಿ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಒಬ್ಬ ಸವಾರ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಮಧು (40) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಕ್’ಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಡಿಕ್ಕಿ ಹೊಡೆದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

ತೀವ್ರ ಗಾಯಗೊಂಡಿದ್ದ ಬೈಕ್ ಸವಾರರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಮಧು ಮೃತಪಟ್ಟಿದ್ದಾರೆ. ಶಿವಮೊಗ್ಗ ಗಿರೀಶ್ (31) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಾಳಗುಪ್ಪ ಉಪಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment