ಶಿವಮೊಗ್ಗ ಲೈವ್.ಕಾಂ | HOLEHONNUR NEWS | 7 ಡಿಸೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಡಕೆ ಬೇಯಿಸುವ ತಾಮ್ರದ ಹಂಡೆಗಳನ್ನು ಕದ್ದಿದ್ದ ಕಳ್ಳರನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೊಳೆಹೊನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ಅಶೋಕನಗರದ ಕುಮಾರ್ ಎಂಬುವವರ ಅಡಕೆ ಮನೆಯಲ್ಲಿದ್ದ ಎರಡು ಅಡಕೆ ಬೇಯಿಸುವ ಹಂಡೆಗಳು ಕಳವಾಗಿದ್ದವು. ಈ ಬಗ್ಗೆ ಕುಮಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಹಂಡೆಗಳನ್ನು ಅಶೋಕನಗರದ ಉಮೇಶ್ ಮತ್ತು ಬುಡೇನ್ ಸಾಬ್ ಎಂಬುವರು ಕಳ್ಳತನ ಮಾಡಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ, ಕದ್ದ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳವು ಮಾಡಿದ ಹಂಡೆಗಳನ್ನು ಬುಡೇನ್ ಸಾಬ್ ತೋಟದಲ್ಲಿ ಮುಚ್ಚಿಟ್ಟಿದ್ದರು. ಪಿಎಸ್ಐ ಸುರೇಶ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






