ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021
ವಿದ್ಯಾರ್ಥಿಗಳು ಹತ್ತುವಾಗ ಚಾಲಕ ಏಕಾಏಕಿ ಬಸನ್ನು ಮುಂದಕ್ಕೆ ಚಲಾಯಿಸಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಹೇಗಾಯ್ತು ಘಟನೆ?
ಶಿವಮೊಗ್ಗ – ಸಾಗರ ಕೆಎಸ್ಆರ್ ಟಿಸಿ ಬಸ್ ಹತ್ತುವಾಗ ಸ್ವಾತಿ ಎಂಬ ವಿದ್ಯಾರ್ಥಿನಿ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಆನಂದಪುರ ಸಮೀಪ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಬಸ್ ಹತ್ತುವಾಗ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದಾನೆ. ಆಯಾತಪ್ಪಿ ವಿದ್ಯಾರ್ಥಿನಿಯಬ್ಬಳು ಕೆಳಗೆ ಬಿದ್ದಿದ್ದಾಳೆ. ಇತರೆ ವಿದ್ಯಾರ್ಥಿಗಳು ಆಕೆಯ ರಕ್ಷಣೆ ಮಾಡಿದ್ದಾರೆ.
ಬಸ್ ನಿಲ್ಲಿಸದೆ ಹೋದರು
ವಿದ್ಯಾರ್ಥಿನಿ ಕೆಳಗೆ ಬಿದ್ದರೂ ಚಾಲಕ ಬಸ್ ನಿಲ್ಲಿಸದೆ ಸಾಗರಕ್ಕೆ ತೆರಳಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸಾಗರದಲ್ಲಿ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಬಸ್ ತಡೆದು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸ್ಸಿನ ಮುಂದೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು
ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಆಗ್ರಹಿಸಿದರು. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ.ಚಿನ್ಮಯ್, ಅಜಿತ್, ಕೇಶವ್, ರೋಷನ್, ವಾಗೀಶ್, ಸಂಚಿತಾ, ಮಾಲತಿ, ಜ್ಯೋತಿ, ಸಹನಾ, ನೇಹಾ ಸೇರಿದಂತೆ ಹಲವರು ಇದ್ದರು.
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

About The Editor
ನಿತಿನ್ ಆರ್.ಕೈದೊಟ್ಲು















