ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ, ಬೆದರಿಕೆ, ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಡಿಸೆಂಬರ್ 2021

ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 2017ರಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಸಾಗರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆ, ಇವತ್ತು ಶಿಕ್ಷೆ ಅವಧಿಯನ್ನು ಪ್ರಕಟಿಸಲಾಯಿತು.

ಏನಿದು ಪ್ರಕರಣ?

2017ರ ಏಪ್ರಿಲ್ 17ರಂದು ಸಾಗರ ರಾಮನಗರದ ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ (26) ಎಂಬಾತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ಕೆಲಸ ಮಾಡುತ್ತಿದ್ದ ‘ಹೊಟೇಲ್’ನಲ್ಲಿ ರಾತ್ರಿ ಕರ್ತವ್ಯಕ್ಕೆ ಬರಬೇಕು ಎಂದು ಕರೆದಿದ್ದಾರೆ. ಅದಕ್ಕಾಗಿ ಕರೆದೊಯ್ಯಲು ಬಂದಿದ್ದೇನೆ’ ಎಂದು ಅನಿಲ್ ಆಕೆಯನ್ನು ಆಟೋದಲ್ಲಿ ಕರೆದೊಯ್ದಿದ್ದ.

ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದ. ಸ್ವಲ್ಪ ಸಮಯದ ಬಳಿಕ ಮಹಿಳೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಚಿಕಿತ್ಸೆಗೆ ತೆರಳಿದ್ದ ಸಂದರ್ಭ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಆರು ತಿಂಗಳ ಬಳಿಕ ದೂರು

2017ರ ಅಕ್ಟೋಬರ್ 15ರಂದು ಮಹಿಳೆಯು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇನ್ಸ್ ಪೆಕ್ಟರ್ ಇ.ಓ.ಮಂಜುನಾಥ್ ಅವರು ಪ್ರಕರಣದ ತನಿಖೆ ನಡೆಸಿ, ಅನಿಲ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

shivamogga live subscribe band

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಹಾಂತಪ್ಪ ಅವರು ಅನಿಲ್ ಡಿಸೋಜಾಗೆ ಶಿಕ್ಷೆ ವಿಧಿಸಿದ್ದಾರೆ.

ಏನೆಲ್ಲ ಶಿಕ್ಷೆ ವಿಧಿಸಲಾಗಿದೆ?

ಅಪರಾಧಿ ಅನಿಲ್ ಡಿಸೋಜಾಗೆ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ 60 ಸಾವಿರ ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಇನ್ನೆರಡು ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಲಾಗಿದೆ. ದಂಡದ ಮೊತ್ತದಲ್ಲಿ 50 ಸಾವಿರ ರೂ.ಹಣವನ್ನು ಮಹಿಳೆಗೆ ಪರಿಹಾರ ರೂಪದಲ್ಲಿ ನೀಡಬೇಕು ಎಂದು ಆದೇಶಿಸಲಾಗಿದೆ.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment