ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ
ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422