ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 13 ಡಿಸೆಂಬರ್ 2021
ಹಾಡಹಗಲೆ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ತಿಲಕನಗರದ ಘಟನೆ ಸಂಭವಿಸಿದೆ.

ತಿಲಕನಗರದ ಮೂರನೆ ಅಡ್ಡರಸ್ತೆಯಲ್ಲಿರುವ ಬ್ಯಾಂಕ್ ಉದ್ಯೋಗಿ ಒಬ್ಬರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಬ್ಯಾಂಕ್ ಉದ್ಯೋಗಿಯು ಕೆಲಸಕ್ಕೆ ಹೋಗಿದ್ದಾರೆ. ಅವರ ಪತ್ನಿ ವೈದ್ಯರಾಗಿದ್ದು, ಅವರು ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಕಳ್ಳರು ಮನೆ ಬಾಗಿಲಿಗೆ ಹಾಕಿದ್ದ ಲಾಕ್ ಮುರಿದು ಒಳ ಪ್ರವೇಶಿಸಿದ್ದಾರೆ.
ಮನೆಯ ಬೆಡ್ ರೂಂ ಕಬೋರ್ಡ್’ನಲ್ಲಿ ಇಟ್ಟಿದ್ದ ಲ್ಯಾಪ್’ಟಾಪ್, ಚಾರ್ಜರ್, ಮೊಬೈಲ್ ಚಾರ್ಜರ್ ಕಳ್ಳತವನಾಗಿದೆ.
ಮಧ್ಯಾಹ್ನ ಊಟದ ಸಮಯಕ್ಕೆ ಮನೆಗೆ ಬಂದ ಪತ್ನಿಗೆ ಕಳ್ಳತನವಾಗಿರುವುದು ಗೊತ್ತಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.

LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






