ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು (ಮೆಸ್ಕಾಂ) ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ.
ಡಿಸೆಂಬರ್ 23ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗ 1ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಕುವೆಂಪು ನಗರ, ರೆಡ್ಡಿ ಲೇಔಟ್, ಜ್ಯೋತಿ ನಗರ, ಜೆಎನ್ಎನ್ಸಿ ಕಾಲೇಜ್, ಶಿವಬಸವ ನಗರ, ಬೊಮ್ಮನಕಟ್ಟೆ ಎ ಇಂದ ಹೆಚ್ ಬ್ಲಾಕ್ವರೆಗೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





