ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಡಿಸೆಂಬರ್ 2021
ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಹಿಂಬಾಗಿಲನ್ನು ಮೀಟಿ ಕಳ್ಳತನ ಮಾಡಲಾಗಿದೆ. ನಗದು, ಬೆಳ್ಳಿ ವಸ್ತುಗಳು, ದುಬಾರಿ ವಾಚ್ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದ ಸವಾಯಿ ಪಾಳ್ಯದ ಜಂಬೂರು ಮೊಹಲ್ಲಾದ ಸರ್ವಾರ್ ಷರೀಫ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸರ್ವಾರ್ ಷರೀಫ್ ಅವರ ಕುಟುಂಬದವರು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲನ್ನು ಮೀಟಿರುವ ಕಳ್ಳರು, ಒಳಗಿರುವ ಬೀರೂ ಬಾಗಿಲನ್ನು ಮೀಟಿ ಕಳ್ಳತನ ಮಾಡಿದ್ದಾರೆ.
ಬೀರೂವಿನಲ್ಲಿದ್ದ 9 ಸಾವಿರ ನಗದು, ಮೂರು ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ಮೌಲ್ಯದ ವಾಚ್ ಕಳ್ಳತನವಾಗಿದೆ. ಮನೆಯಲ್ಲಿದ್ದ ಮತ್ತೊಂದು ಬೀರೂ ಬಾಗಿಲನ್ನು ಮೀಟಿರುವ ಕಳ್ಳರಿಗೆ ಅದರಲ್ಲಿ ಏನೂ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಯ ಹಿಂಬಾಗಲು ತೆರೆದಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು, ಸರ್ವಾರ್ ಷರೀಫ್ ಅವರಿಗೆ ಕರೆ ಮಾಡಿ, ವಿಚಾರ ತಿಳಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಕುಟುಂಬದವರಿಗೆ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





