ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SAGARA NEWS | 29 ಡಿಸೆಂಬರ್ 2021
ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶ್ರೀಗಂಧ, ಬೀಟೆ ತುಂಡುಗಳು ಮತ್ತು ಪರವಾನಗಿ ಇಲ್ಲದ ಒಂದು ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕಿನ ಚಿಪ್ಳಿ-ಲಿಂಗದಹಳ್ಳಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಪುರುಷೋತ್ತಮ್ ಎಂಬುವನನ್ನು ಬಂಧಿಸಿ ಬೀಟೆ ಮತ್ತು ಶ್ರೀಗಂಧದ ತುಂಡುಗಳು ಹಾಗೂ ಪರವಾನಗಿ ಇಲ್ಲದ ಬಂದೂಕು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿ ಮೋಹನ್ಕುಮಾರ್ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಪ್ರಮೋದ್ ಡಿ.ಆರ್. ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಿ ಸಿಪಿಐ ಗಿರೀಶ್ ಮತ್ತು ಎಸಿಎಫ್ ಶ್ರೀಧರ್, ಅರಣ್ಯ ರಕ್ಷಕರಾದ ಪ್ರದೀಪ್, ಶಿವಾನಂದ್, ಸುಮಿತಾ, ಲೋಕೇಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.