ಶಿವಮೊಗ್ಗ ಬೈಪಾಸ್‌ನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯವಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಬಸ್ ತಡೆದು ಪ್ರತಿಭಟಿಸಿದರು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ ಎ ಹುದಾ ಬಳಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ರಕ್ತದ ಮಡುವಿನಲ್ಲಿದ್ದ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳೀಯರ ಆಕ್ರೋಶ

ಅಪಘಾತಕ್ಕೀಡಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು. ಅಲ್ಲದೆ ಬೈಪಾಸ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ವೇಗ ತಗ್ಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದರು.

ಪಶ್ಚಿಮ ಸಂಚಾರ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ.

ABOUT ME NEW FINAL FINAL

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment