ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಶಿವಮೊಗ್ಗ KSRTC ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗವೊಂದರಲ್ಲಿ ಕುಳಿತಿದ್ದ ಇಬ್ಬರು ಯುವಕರ ಮೇಲೆ, ಪೊಲೀಸರು ದಾಳಿ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬುದ್ಧ ನಗರದ ಖಾಲಿ ಜಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಆಸೀಫ್ ಅಲಿಯಾಸ್ ಪೋಕ್ಲೈನ್ (21), ರೋಷನ್ ಜಮೀರ್ (24) ಎಂಬುವವರನ್ನು ಬಂಧಿಸಿದ್ದಾರೆ.
ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಈ ಯುವಕರು ಖಾಲಿ ಜಾಗದಲ್ಲಿ ಕುಳಿತಿದ್ದರು. ಅನುಮಾನದ ಮೇರೆಗೆ ವಿಚಾರಣೆ ಮಾಡಿದಾಗ, ಮಾದಕ ವಸ್ತು ಸೇವನೆ ಮಾಡಿರುವಂತೆ ಕಂಡು ಬಂದಿದೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಯಿತು. ಇಬ್ಬರು ಗಾಂಜಾ ಸೇವನೆ ಮಾಡಿರುವುದ ದೃಢಪಟ್ಟಿದೆ.
ಇಬ್ಬರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.