ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ಸ್ಮಾರ್ಟ್ ಸಿಟಿ ಕಚೇರಿ ಮುಂದೆ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ, ರಾಜ್ಯ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಆದರೆ ಬಹುತೇಕ ಕಡೆ ಅವೈಜ್ಞಾನಿಕವಾಗಿದೆ. ಇದರಿಂದ ಶಿವಮೊಗ್ಗದ ನಾಗರಿಕರು, ವ್ಯಾಪಾರಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದ ದುರ್ಗಿಗುಡಿ, ಹೊಸಮನೆ, ಶರಾವತಿ ನಗರ, ಜೈಲ್ ರಸ್ತೆ ಸೇರಿದಂತೆ ಹಲವು ಕಡೆ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇಲಾಖೆಗಳ ನಡುವೆ ಸಮನ್ವಯ ಇಲ್ಲದೆ ಇರುವುದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಕೂಡಲೇ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ತೊಡಗಿರುವ ಸಂಬಂಧಿಸಿದ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಜನರ ತೆರಿಗೆ ಹಣ ಪೋಲಾಗುತ್ತಿರುವುದನ್ನು ತಡೆಯಬೇಕೆಂದು ಒತ್ತಾಯಿಸಿದರು. ಈ ಸಂಬಂಧ ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಮು ಡಿ, ನರಸಿಂಹ ಗಂಧದಮನೆ, ಹೆಚ್. ಪಾಲಾಕ್ಷಿ, ನಾಗರಾಜ ಕಂಕಾರಿ, ಎಸ್. ಬಸವರಾಜ, ಪರಶುರಾಂ ಬಿ., ಮಂಜುನಾಥ ನವುಲೆ, ಎಂ. ರಾಜಣ್ಣ, ದಿನೇಶ್, ಎಂ. ಮಂಜುನಾಥ್ ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422