ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಜನವರಿ 2022
ಶಿವಮೊಗ್ಗದಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದೆ ಎಂದ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು 112 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.
ಒಟ್ಟು ಸೋಂಕಿತರ ಪೈಕಿ 44 ಮಂದಿ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ. ಭದ್ರಾವತಿಯ 39, ತೀರ್ಥಹಳ್ಳಿಯ 3, ಶಿಕಾರಿಪುರದ 3, ಸಾಗರದ 17, ಸೊರಬದ 3 ಮತ್ತು ಇತರೆ ಜಿಲ್ಲೆಯಿಂದ ಬಂದ ಮೂವರಿಗೆ ಸೋಂಕು ತಗುಲಿದೆ.
ಐನೂರರ ಸಮೀಪಕ್ಕೆ ಸಕ್ರಿಯ ಪ್ರಕರಣ
ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಐನೂರರ ಗಡಿಗೆ ತಲುಪಿದೆ. ಜಿಲ್ಲೆಯಲ್ಲಿ ಸದ್ಯ 465 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 54 ಮಂದಿ ಕೋವಿಡ್ ಆಸ್ಪತ್ರೆಗೆಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 28 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಹೆಚ್’ಸಿಯಲ್ಲಿ 14, ಟ್ರಯೇಜ್’ನಲ್ಲಿ 11 ಮಂದಿ ಇದ್ದಾರೆ. 358 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.
ಇನ್ನು, ಜಿಲ್ಲೆಯಲ್ಲಿ ಎಂಟು ಮಂದಿ ಕರೋನದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















