ಶಿವಮೊಗ್ಗದಲ್ಲಿ ರಾಜಕಾರಣಿಗಳೆ ಮಾಸ್ಕ್ ಮರೆತರು, ದಂಡ ಹಾಕಬೇಕಿದ್ದವರು ಮೂಕ ಪ್ರೇಕ್ಷಕರಾದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022

ಕರೋನ ರೂಲ್ಸ್ ಪಾಲನೆ ಮಾಡುವ ಮೂಲಕ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೆ ನಿಯಮ ಉಲ್ಲಂಘಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಮಲ್ಲೇಶ್ವರ ನಗರದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಿವಮೊಗ್ಗ ಜಿಲ್ಲಾ ಕಚೇರಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಪ್ರಮುಖರು ಮಾಸ್ಕ್ ಧರಿಸಿರಲಿಲ್ಲ.

ಮಾಸ್ಕ್ ಮರೆತ ಜನಪ್ರತಿನಿಧಿಗಳು

ಕರೋನ ವ್ಯಾಪಕವಾಗಿ ಹರಡುತ್ತಿದೆ. ಜನರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ,  ಡಾ.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಸೇರಿದಂತೆ ಹಲವರು ಮಾಸ್ಕ್ ಧರಿಸಿರಲಿಲ್ಲ.

ಮಾದರಿಯಾದ ಸಂಸದ, ಮೇಯರ್

ಇನ್ನು, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರು ಮಾಸ್ಕ್ ಧರಿಸಿಕೊಂಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಸಂಸದ ರಾಘವೇಂದ್ರ ಅವರು ಫೋಟೊಗೆ ಪೋಸ್ ಕೊಡಲು ಮಾಸ್ಕ್ ತೆಗೆದಿದ್ದರು. ಕೊನೆಗೆ ಕಾರು ಹತ್ತಿ ಮರಳುವವರೆಗೂ ಇಬ್ಬರು ಮಾಸ್ಕ್ ಧರಿಸಿದ್ದರು. ಮತ್ತೊಂದೆಡೆ, ಕಾರ್ಯಕ್ರಮದ ಕೊನೆ ಹಂತದಲ್ಲಿ ಸಚಿವ ಈಶ್ವರಪ್ಪ ಅವರು ಮಾಸ್ಕ್ ತರಿಸಿಕೊಂಡು ಧರಿಸಿದರು.

ಮಾಸ್ಕ್ ಧರಿಸದೆ ರಸ್ತೆಗಿಳಿಯುವ ಸಾರ್ವಜನಿಕರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದಲ್ಲಿ ದಂಡ ವಿಧಿಸುತ್ತಿದ್ದಾರೆ. ದಂಡ ಕಟ್ಟದಿದ್ದರೆ ಜೈಲಿಗೆ ಕಳುಹಿಸುತ್ತೇವೆ ಎಂದ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳ ವಿಚಾರಕ್ಕೆ ಬಂದಾಗ ಅಧಿಕಾರಿಗಳು ತುಟಿ ಬಿಚ್ಚದಿರುವುದು ವಿಪರ್ಯಾಸ.

ಇದನ್ನೂ ಓದಿ | ಮಾಸ್ಕ್ ದಂಡ ಹಾಕಲು ಬಂದ ಶಿವಮೊಗ್ಗ ಪಾಲಿಕೆ ಅಧಿಕಾರಿಗಳಿಗೆ ನಡುರಸ್ತೆಯಲ್ಲಿ ಜನರಿಂದ ಕ್ಲಾಸ್

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment