ಶಿವಮೊಗ್ಗದ ಲೈವ್.ಕಾಂ | THIRTHAHALLI CRIME NEWS | 14 ಜನವರಿ 2022
ಅಡಕೆ ಚೇಣಿಯಿಂದ ಉಂಟಾಗಿದ್ದ ನಷ್ಟದಿಂದ ಮನನೊಂದಿದ್ದ ದಂಪತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಸಂತೆಹಕ್ಲು ಸಮೀಪದ ಪೂರಲು ಕೊಪ್ಪದಲ್ಲಿ ಗುರುವಾರ ಘಟನೆ ಸಂಭವಿಸಿದೆ. ಮಂಜುನಾಥ್ (46) ಮತ್ತು ಅವರ ಪತ್ನಿ ಉಷಾ (43) ನೇಣಿಗೆ ಶರಣಾದ ದಂಪತಿ. ಅವರಿಗೆ 18 ಮತ್ತು 16 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದಾರೆ.
ದಂಪತಿ 1 ಎಕರೆ ಜಮೀನು ಹೊಂದಿದ್ದು, ಅಡಕೆ ಚೇಣಿ ಹಿಡಿಯಲು ಸಾಲ ಮಾಡಿದ್ದರು. ನಷ್ಟ ಅನುಭವಿಸಿ ಮನನೊಂದಿದ್ದ ಅವರು ಇದೇ ಕಾರಣಕ್ಕೆ ಆತ್ಮ ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಂಜುನಾಥ್ ಗುರುವಾರ ಮುಂಜಾನೆ 5ಕ್ಕೆ ಎದ್ದು ಪತ್ನಿ ಹಾಗೂ ಅಡಕೆ ಚೇಣಿ ಕೆಲಸಕ್ಕಿದ್ದವರನ್ನು ಎಬ್ಬಿಸಿ ಹಂಡೆಗೆ ಬೆಂಕಿ ಹಾಕಿದ್ದಾರೆ. ಬಳಿಕ ಉಪ್ಪರಗೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಪತ್ನಿ ಕೂಡ ರೂಮಿನಲ್ಲಿ ನೇಣು ಹಾಕಿಕೊಂಡಿದ್ದಾರೆ.
ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ಈ ವೇಳೆ ಮನೆಯಲ್ಲೇ ಇದ್ದರು. ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲ ಮಾಡಿಕೊಂಡಿದ್ದು ಕರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ ಅವರು ಮನೆಯಲ್ಲಿ ನೇಣಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು