ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022
ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸನ್ನು ಬಂದ್ ಮಾಡಲಾಗಿದೆ. ಐದು ದಿನ ತರಗತಿಗಳನ್ನು ನಡೆಸದಿರಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕುವೆಂಪು ವಿಶ್ವವಿದ್ಯಾಲಯದ ಐವರು ಸಿಬ್ಬಂದಿಗೆ ಕರೋನ ಸೋಂಕು ತಗುಲಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಎಲ್ಲರೂ ಹೋಮ್ ಕ್ವಾರಂಟೈನ್’ಗೆ ಒಳಗಾಗಿದ್ದಾರೆ.
ಐದು ದಿನ ತರಗತಿಗಳಿಲ್ಲ
ಇನ್ನು, ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಕುವೆಂಪು ವಿವಿ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ತರಗತಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪ ಕುಲಸಚಿವರು, ಜನವರಿ 17 ರಿಂದ 21ರವರೆಗೆ ಸ್ನಾತಕೋತ್ತರ ತರಗತಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಆನ್ ಲೈನ್ ಕ್ಲಾಸ್
ಐದು ದಿನ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಪನ್ಯಾಸಕರು ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಶೈಕ್ಷಣಿಕ ವಿಭಾಗದ ಉಪ ಕುಲಸಚಿವರ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕ್ಯಾಂಪಸ್’ನಲ್ಲಿ ಸ್ಯಾನಿಟೈಸರ್
ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿವಿ ಕ್ಯಾಂಪಸನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಆಡಳಿತ ಭವನ, ತರಗತಿಗಳು, ಹಾಸ್ಟೆಲ್ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಜ.22 ಮತ್ತು 23ರಂದು ವೀಕೆಂಡ್ ಕರ್ಫ್ಯೂ ಇರಲಿದೆ. ಹಾಗಾಗಿ ಒಂದು ವಾರ ಕುವೆಂಪು ವಿವಿ ಕ್ಯಾಂಪಸ್’ನಲ್ಲಿ ತರಗತಿಗಳು ನಡೆಯುವುದಿಲ್ಲ.