ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022
ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಮೇಲೆ ಕರೋನ ಕರಿಛಾಯೆ ಆವರಿಸಿದೆ. ಜಾತ್ರೆಯನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಅತ್ಯಂತ ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯನ್ನು ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಅತ್ಯಂತ ಸರಳವಾಗಿ ಜಾತ್ರೆ ನಡೆಯಲಿದೆ ಎಂದು ತಿಳಿಸಿದರು.
‘ಜಿಲ್ಲಾಡಳಿತದ ನಿರ್ಧಾರಕ್ಕೆ ಬದ್ಧ’
ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಜಾತ್ರೆ ನಡೆಸುವ ಸಂಬಂಧ ದೇವಸ್ಥಾನ ಸಮಿತಿಯು ತಮ್ಮೊಂದಿಗೆ ಚರ್ಚೆ ನಡೆಸಿತು. ಈ ವೇಳೆ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಸಮಿತಿಯವರು ತಿಳಿಸಿದ್ದಾರೆ. ಜಾತ್ರೆಯನ್ನು ನಿಗದಿತ ದಿನಾಂಕಕ್ಕಿಂತಲೂ ಒಂದು ತಿಂಗಳು ಮುಂದೂಡಲಾಗಿದೆ. ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಜಾತ್ರೆ ನಡೆಯಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಅತ್ಯಂತ ಸರಳವಾಗಿ ಜಾತ್ರೆ ಆಚರಣೆ
ಈ ಭಾರಿ ಕೋಟೆ ಮಾರಿಕಾಂಬ ದೇವಿ ಜಾತ್ರೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತದೆ. ಅಂಗಡಿಗಳು, ಸ್ಟಾಲ್’ಗಳು, ಎಗ್ಸಿಬಿಷನ್’ಗಳ್ಯಾವುದು ಇರುವಂತಿಲ್ಲ. ಹೊರಗಿನ ಭಕ್ತರು ಆಗಮಿಸಿದಂತೆ ನೋಡಿಕೊಂಡು, ಸರಳವಾಗಿ ಜಾತ್ರೆ ಮಾಡಬೇಕು. ಸೋಂಕು ಉಲ್ಬಣಗೊಳ್ಳುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಇನ್ನು, ಮಾರ್ಚ್ 22 ಮತ್ತು 23ರಂದು ಕೋಟೆ ಮಾರಿಕಾಂಬ ದೇವಿ ಜಾತ್ರೆ ನಡೆಸಲು ದೇವಸ್ಥಾನ ಸಮಿತಿ ತೀರ್ಮಾನಿಸಿದೆ.