ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜನವರಿ 2022
ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ರಾತ್ರಿ ದಾಳಿ ನಡೆದಿದ್ದು, ಪ್ರಮುಖ ಆರೋಪಿ ಒಬ್ಬನಿಂದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರಕರಣ ಸಂಬಂಧ ಜೈಲಿನಲ್ಲಿರುವ ಆರೋಪಿ ಬಚ್ಚನ್ ಮೊಬೈಲ್ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಇತ್ತೀಚೆಗೆ ಜೈಲಿನಿಂದಲೆ ಕರೆ ಮಾಡಿದ ಬಚ್ಚನ್ ಉದ್ಯಮಿ ಒಬ್ಬರಿಗೆ ಬೆದರಿಕೆ ಒಡ್ಡಿದ್ದ ಆರೋಪವಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರೋರಾತ್ರಿ ಪೊಲೀಸರ ದಾಳಿ
ಆರೋಪಿ ಬಚ್ಚನ್ ಜೈಲಿನಲ್ಲಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಹಿನ್ನಲೆ ಪೊಲೀಸರು ದಾಳಿ ನಡೆಸಿದ್ದಾರೆ.
‘ಕಳೆದ ರಾತ್ರಿ ಶಿವಮೊಗ್ಗ ಸಿಇಎನ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿದೆ. ಬಚ್ಚನ್ ಇದ್ದ ಸೆಲ್ ಮೇಲೆ ದಾಳಿ ಮಾಡಿ, ಮೊಬೈಲ್ ಫೋನ್ ಒಂದನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆತನನ್ನು ಪ್ರತ್ಯೇಕವಾಗಿ ಇರಿಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.